ದೇವಾಡಿಗ ಸೇವಾ ಸಂಘ(ರಿ.)ನಾವುಂದ ಇದರ ದೇವಾಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ ಸಮಾರಂಭ ಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು.
ಎನ್.ರಮೇಶ ದೇವಾಡಿಗ ಅಡಿಕೆಕೊಡ್ಲು ವಂಡ್ಸೆ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀಸುಬ್ರಹ್ಮಣ್ಯ ದೇವಸ್ಥಾನ ಮರವಂತೆ ಧರ್ಮದರ್ಶಿ ತಿಮ್ಮ.ವಿ.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ತಾ.ಪಂ ಸದಸ್ಯ ರಾಜು ದೇವಾಡಿಗ, ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ,ಗೋಪಾಲ ದೇವಾಡಿಗ ಮರವಂತೆ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಪ್ರಕಾಶ ದೇವಾಡಿಗ ಉದ್ಯಮಿ ಕುದ್ರುಕೋಡು, ಲಕ್ಷ್ಮಿ ಜನಾರ್ಧನ ದೇವಸ್ಥಾನ ಜೀಣೋದ್ದಾರ ಸಮಿತಿ ಅಧ್ಯಕ್ಷ ಜನಾರ್ಧನ ಎಮ್.ದೇವಾಡಿಗ,ಕೊಲ್ಲೂರು ಡಾಟ್ ಕಾಮ್‌ನ ಸಂಯೋಜಕಿ ಪ್ರಿಯದರ್ಶಿನಿ ದೇವಾಡಿಗ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಿದರು.
ಸುಬ್ಬಯ್ಯ ದೇವಾಡಿಗ ಸ್ವಾಗತಿಸಿದರು.ರವಿ ದೇವಾಡಿಗ ತಲ್ಲೂರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
No comments:
Post a Comment